ದಾವಣಗೆರೆ ಆ.19
ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ 105 ನೇ
ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 20 ರಂದು
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕೋವಿಡ್ ಹಿನ್ನಲೆಯಲ್ಲಿ
ಅರಸುರವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ
ಆಚರಿಸಲಾಯಿತು.
ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾ ಮಡಿವಾಳ
ಸಮಾಜದ ಜಿಲ್ಲಾಧ್ಯಕ್ಷ ಎಂ.ಉಮಾಪತಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,
ಎಎಸ್‍ಪಿ ರಾಜೀವ್, ಜಿ.ಪಂ. ಉಪ ಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ
ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ, ಸಮಾಜ ಕಲ್ಯಾಣ
ಇಲಾಖೆಯ ಉಪ ನಿರ್ದೇಶಕ ಶಿವಾನಂದ ಕುಂಬಾರ್, ಪರಿಶಿಷ್ಟ ವರ್ಗಗಳ
ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ರೆಡ್ಡಿ, ಮಹಿಳಾ ಮತ್ತು
ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ,
ವಿವಿಧ ಅಭಿವೃದ್ದಿ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು, ಅಧಿಕಾರಿಗಳು
ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *