ದಾವಣಗೆರೆ ಆ.20
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಗಸ್ಟ್ 22 ರಂದು ಆಚರಿಸಲಿರುವ
ಗಣೇಶ ಚತುರ್ಥಿಯನ್ನು ಪರಿಸರ ಸಂರಕ್ಷಣೆ ದೃಷ್ಟಿಯಿಂದ
ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಗಣೇಶ ಮೂರ್ತಿ
ತಯಾರಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ
ಕೆಳಕಂಡ ಅನುಸರಣಾ ಮಾರ್ಗಸೂಚಿಗಳನ್ನು ಅನುಸರಿಸಲು
ತಿಳಿಸಿದೆ.
ಗಣೇಶ ಮೂರ್ತಿಗಳನ್ನು ಜೇಡಿ ಮಣ್ಣಿನಿಂದ ತಯಾರಿಸಿ,
ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ
ಮಾರಾಟ ಮಾಡುವುದು. ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಗಣೇಶ
ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ
ಮಹಾನಗರಪಾಲಿಕೆ ಕಾಯ್ದೆ ರೀತ್ಯಾ ಕಾನೂನು ಕ್ರಮ
ಕೈಗೊಳ್ಳಲಾಗುವುದು ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ
ತಯಾರಿಸಿದ ಗಣೇಶ ಮೂರ್ತಿಗಳನ್ನು
ವಶಪಡಿಸಿಕೊಳ್ಳಲಾಗುವುದು ಮತ್ತು ರೂ.10,000/- ಗಳ ದಂಡ
ವಿಧಿಸಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್
ಪ್ಯಾರೀಸ್‍ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ
ಮಾಡಬಾರದೆಂದು ಸೂಚಿಸಲಾಗಿದೆ. ಸಾರ್ವಜನಿಕರು ಪ್ಲಾಸ್ಟರ್ ಆಫ್
ಪ್ಯಾರೀಸ್‍ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು
ಖರೀದಿಸಬಾರದೆಂದು ಹಾಗು ಈ ಮೂಲಕ ಪರಿಸರ ಹಿತರಕ್ಷಣೆಗಾಗಿ
ಸಹಕರಿಸಬೇಕೆಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *