ದಾವಣಗೆರೆ ಆ.20
2020-21 ನೇ ಸಾಲಿನಲ್ಲಿ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದಿಂದ ಉಪ್ಪಾರ
ಸಮುದಾಯಗಳ ಅಭ್ಯರ್ಥಿಗಳಿಗೆ ವಿವಿಧ ಸಾಲ ಮತ್ತು
ಸಹಾಯಧನದ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ
ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ
ನಮೊನೆಗಳನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ
ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಪಡೆದು
ಅಗತ್ಯ ದಾಖಲಾತಿಗಳೊಂದಿಗೆ ಸೆ.5 ರೊಳಗಾಗಿ ಸಲ್ಲಿಸಬಹುದಾಗಿದ್ದು,
ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.
ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಹಿಂದುಳಿದ ವರ್ಗಗಳ
ಪ್ರವರ್ಗ-1 ಕ್ಕೆ ಸೇರಿದ ಉಪ್ಪಾರ ಹಾಗೂ ಇದರ ಉಪಜಾತಿಗೆ
ಸೇರಿದವರಾಗಿರಬೇಕು. ಸ್ವಯಂ ಉದ್ಯೋಗ ಸಾಲ ಯೋಜನೆಯಡಿ
ಅರ್ಜಿದಾರರು ಜಾತಿ ಆದಾಯ ಪ್ರಮಾಣ ಪತ್ರ ಹೊಂದಿದ್ದು, ಕುಟುಂಬದ
ವಾರ್ಷಿಕ ವರಮಾನ 1.20 ಲಕ್ಷದೊಳಗಿರಬೇಕು. ಅರ್ಜಿದಾರರ
ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು
ಕೆ.ವೈ.ಸಿ ಬಗ್ಗೆ ಆಧಾರ್ ಕಾರ್ಡ್/ಚುನವಣಾ ಗುರುತಿನ ಚೀಟಿ/ಪಾನ್ ಕಾರ್ಡ್
ದಾಖಲೆಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿದಾರರು ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ
ಬ್ಯಾಂಕ್‍ಗಳ ಖಾತೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ
ವೆಬ್‍ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದಾಗಿದೆ ಎಂದು
ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.