ದಾವಣಗೆರೆ ಆ.26
    ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ
ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾ ಸಿಂಧು
ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣ
ಪತ್ರವನ್ನು ಪಡೆಯಬಹುದಾಗಿದೆ.
   ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ಇ-ಆಡಳಿತ
ಇಲಾಖೆಯ ಸೇವಾ ಸಿಂಧು ಯೋಜನೆಯಡಿ ಉಚಿತವಾಗಿ ನೋಂದಣಿ
ಮಾಡಿಸಲು ಆನ್‍ಲೈನ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಈ
ತಂತ್ರಾಂಶ ಬಳಸಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣಿ,
ನವೀಕರಣ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು.
   ಅಲ್ಲದೇ ಈಗಾಗಲೇ ಮ್ಯಾನುಯಲ್ ಆಗಿ ವಿತರಿಸಲಾಗುತ್ತಿರುವ
ನೊಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಿಲಾಗಿದೆ. ಈ
ಹಿನ್ನೆಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಆನ್‍ಲೈನ್ ಮೂಲಕವೇ
ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣ ಪತ್ರವನ್ನು ಪಡೆಯಬೇಕೆಂದು
ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ
ಜಿ.ಎಸ್.ಶಶಿಧರ ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *