ದಾವಣಗೆರೆ ಆ.27
2020-21ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ
ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಪುರುಷ
ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ
ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು
ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು
ಆಹ್ವಾನಿಸಲಾಗಿದ್ದು, ಪ್ರತಿ ಅಭ್ಯರ್ಥಿಗೆ ಪ್ರತಿ ತಿಂಗಳು ರೂ.1000 ರಿಂದ

1200 ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ
ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ
ಕಲ್ಪಿಸಲಾಗುವುದು. ಅಭ್ಯರ್ಥಿಯು 15 ರಿಂದ 23 ವರ್ಷ
ವಯೋಮಾನದಾವರಾಗಿರಬೇಕು. ಹಾಗೂ ಪರಿಶಿಷ್ಟ ಜಾತಿ ಮತ್ತು
ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ವರ್ಷ
ವಯೋಮಾನದಾವರಾಗಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ
ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ
ಆಧಾರವಾಗಿರುತ್ತವೆ.
ಮೇಲ್ಕಂಡ ಡಿಪ್ಲೋಮಾ ಕೋರ್ಸ್‍ಗಾಗಿ ಕರ್ನಾಟಕ ಕೈಮಗ್ಗ
ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)- 22
ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ,
ಸೇಲಂ, (ತಮಿಳುನಾಡು)- 15 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ
ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ-03
ಅಭ್ಯರ್ಥಿಗಳು(ನೆಲ್ಲೂರು, ಆಂಧ್ರಪ್ರದೇಶ)
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು
(ಕೇರಳ)-02 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ
ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ
ಕೌನ್ಸಿಲಿಂಗಗಾಗಿ ಕರೆಯಲಾಗುವುದು. ಹೆಚ್ಚಿನ ವಿವರಗಳಿಗಾಗಿ
ಕಚೇರಿಯ ದೂ.ಸಂ: 08192-262362 ಯನ್ನು ಸಂಪರ್ಕಿಸಿ ಅರ್ಜಿಯನ್ನು
ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ
ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ,
ನರಸಾಪೂರ, ಗದಗ – ಬೆಟಗೇರಿ – 587 102, (ಕರ್ನಾಟಕ) ಇಲ್ಲಿಗೆ
ಸಲ್ಲಿಸಬೇಕು. ನ.10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ
ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ
ಸುರೇಶ್.ಎನ್ ತಡಕನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *