ದಾವಣಗೆರೆ ಆ.31
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ
ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ,
ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ
ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ
ಇದ್ದ ಒಟ್ಟು 27 ಅಂಗನವಾಡಿ ಕಾರ್ಯಕರ್ತೆ ಹಾಗೂ 87 ಅಂಗನವಾಡಿ
ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ
ಮಾಡಲು ಜನವರಿ 28 ರಂದು ಅರ್ಜಿಗಳನ್ನು ಆನ್‍ಲೈನ್ ಮೂಲಕ
ಆಹ್ವಾನಿಸಲಾಗಿದ್ದು, ಈ ಹುದ್ದೆಗಳ ತಾತ್ಕಾಲಿಕ ಪಟ್ಟಿಯನ್ನು ಆ.28
ರಂದು ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ
ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ
ಹುದ್ದೆಗಳಿಗೆ ಮಧ್ಯವರ್ತಿಗಳಿಂದ ಹುದ್ದೆ ಕೊಡಿಸುವುದಾಗಿ ನಂಬಿಸಿ
ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಅಧಿಕಾರಿಗಳ ಗಮನಕ್ಕೆ
ಬಂದಿರುತ್ತದೆ.
ಅಭ್ಯರ್ಥಿಗಳು ಗಳಿಸಿರುವ ಗರಿಷ್ಟ ಅಂಕ ಹಾಗೂ ಅರ್ಹ
ಮಾನದಂಡಗಳ ಮೂಲಕ ಹುದ್ದೆಗಳನ್ನು ಭರ್ತಿ
ಮಾಡಲಾಗಿರುತ್ತದೆ. ಯಾವುದೇ ಅಧಿಕಾರಿ ಹಾಗೂ
ಮಧ್ಯವರ್ತಿಗಳು ಹಣಕ್ಕಾಗಿ ಬೇಡಿಕೆ ಇಟ್ಟಲ್ಲಿ ಉಪರ್ನೀಶಕರು, ಮಹಿಳಾ
ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಇವರನ್ನು
ಸಂರ್ಪಕಿಸಬಹುದಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ
ಕಚೇರಿ ದೂರವಾಣಿ ಸಂಖ್ಯೆ: 08192-264056, ಉಪನಿರ್ದೇಶಕರ ಮೊಬೈಲ್
ಸಂಖ್ಯೆ: 9538993366 ಸಂರ್ಪಕಿಸಬಹುದೆಂದು ಮಹಿಳಾ ಮತ್ತು
ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.