ದಾವಣಗೆರೆ, ಆ.31-
ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ಜಿಲ್ಲೆ
ಎಂದು ಘೋಷಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಲ್ಲಿ ತಂಬಾಕು
ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಆ.31 ರಂದು ಚನ್ನಗಿರಿ
ಪಟ್ಟಣದÀ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ
ತಂಬಾಕು ದಾಳಿ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,
ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ತಾಲ್ಲೂಕು ಆಡಳಿತ, ಶಿಕ್ಷಣ
ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಹಾಗೂ
ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಈ ವಿಶೇಷ
ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ತಂಬಾಕು ನಿಯಂತ್ರಣಾ ತನಿಖಾ ತಂಡವು ಸಿಗರೇಟು ಮತ್ತು
ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 16
ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 12 ಪ್ರಕರಣ ಸೇರಿದಂತೆ ಒಟ್ಟು 28
ಪ್ರಕರಣಗಳನ್ನು ದಾಖಲಿಸಿ, ರೂ. 2,800/- ಗಳ ದಂಡವನ್ನು
ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.
ತಂಡವು ಚನ್ನಗಿರಿ ಪಟ್ಟಣದ ಬಸ್ ನಿಲ್ದಾಣದ ಸುತ್ತಮುತ್ತಲಿನ
ಹೊಟೇಲ್, ಬಾರ್ &ಚಿmಠಿ; ರೆಸ್ಟೋರೆಂಟ್, ಪಾನ್‍ಶಾಪ್ ಇತ್ಯಾದಿ ಪ್ರಮುಖ
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು
ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು
ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ
ಮೂಲಕ ಜಾಗೃತಿ ಮೂಡಿಸಲಾಯಿತು. ಹಾಗೂ ಸಾರ್ವಜನಿಕ
ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ
ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ
ಅಳವಡಿಸಲು ತಾಕೀತು ಮಾಡಲಾಯಿತು.
ಕೋಟ್ಪಾ ಕಾಯಿದೆ 2003 ರ ಸೆಕ್ಷನ್ 6ಎ ಪ್ರಕಾರ 18
ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು
ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ
ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ ಹಾಗೂ ಶಾಲಾ ಕಾಲೇಜು,
ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು
ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ
ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು
ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ
ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು
ಮಾಹಿತಿ ನೀಡಿದರು.
ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ಚನ್ನಗಿರಿ ತಾಲ್ಲೂಕು
ಆರೋಗ್ಯಾಧಿಕಾರಿ ಡಾ.ಪ್ರಭು.ಬಿ.ಎಂ. ರಾಷ್ಟ್ರೀ ತಂಬಾಕು ನಿಯಂತ್ರಣ
ಕಾರ್ಯಕ್ರಮದ ಜಿಲ್ಲಾ ಸಲಹೆಗಾರರದ ಸತೀಶ ಕಲಹಾಳ, ಸಮಾಜ
ಕಾರ್ಯಕರ್ತ ಕೆ.ಪಿ.ದೇವರಾಜ್, ಹಿರಿಯ ಆರೋಗ್ಯ ಸಹಾಯಕ
ಅಶೋಕ.ಎಂ, ಪುರಸಭೆಯ ಆರೋಗ್ಯ ನಿರೀಕ್ಷಕರಾದ
ಶಿವರುದ್ರಪ್ಪ, ಪೊಲೀಸ್ ಸಿಬ್ಬಂದಿ ಕಾಜಿ ಸೇರಿದಂತೆ ಇತರರಿದ್ದರು.