ದಾವಣಗೆರೆ ಸೆ.05
ಜಿಲ್ಲೆಯಲ್ಲಿ ಸೆ.13 ರಂದು 34 ಪರೀಕ್ಷಾ ಕೇಂದ್ರದಲ್ಲಿ ನಿಟ್
(ಯುಜಿ) ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ
ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀ
ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ
ನಿಷೇಧಿತ ಪ್ರವೇಶವೆಂದು ಘೋಷಿಸಿ ಆದೇಶಿಸಲಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 24, ಹರಿಹರ 7, ಹೊನ್ನಾಳಿ 2, ಚನ್ನಗಿರಿ
1 ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 34 ಪರೀಕ್ಷಾ ಕೇಂದ್ರಗಳಲ್ಲಿ
ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು
ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ
ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ
ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್, ಸೈಬರ್ ಕೆಫೆ
ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಸಹ
ಆದೇಶಿಸಲಾಗಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಪರೀಕ್ಷಾ
ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು
ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ
ಜೆರಾಕ್ಸ್, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು
ಮುಚ್ಚಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಕ್ರಮ
ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಾಹಂತೇಶ ಬೀಳಗಿ
ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.