ದಾವಣಗೆರೆ ಸೆ.21
ಸೆ.21 ರಿಂದ 28 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಜಿಲ್ಲೆಯ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್‍ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.
