ದಾವಣಗೆರೆ ಸೆ.22
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.23 ರಂದು
ಬೆಳಿಗ್ಗೆ 10.30 ಕ್ಕೆ ದಾವಣಗೆರೆಯ ಪಿ.ಜೆ ಬಡಾವಣೆಯಲ್ಲಿರುವ ಮಹಿಳಾ
ಪೊಲೀಸ್ ಠಾಣೆ ಆವರಣದಲ್ಲಿ ಹಾಗೂ ಬೆಳಿಗ್ಗೆ 11 ಗಂಟೆಗೆ ಬೇತೂರು
ಆರ್.ಎಂ.ಸಿ ಲಿಂಕ್ ರಸ್ತೆಯಲ್ಲಿರುವ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ
ಕಾನೂನು ಸೇವಾ ಸಲಹಾ ಪೆಟ್ಟಿಗೆಗಳ ಉದ್ಘಾಟನಾ
ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ
ಸದಸ್ಯ ಕಾರ್ಯದರ್ಶಿಗಳಾದ ಸಾಬಪ್ಪ ಉದ್ಘಾಟಿಸುವರು. ರಾಜ್ಯ
ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಎಲ್.ಹೆಚ್.ಅರುಣ್
ಕುಮಾರ್ ಮತ್ತು ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು
ಉಪಸ್ಥಿತರಿರುವರೆಂದು ಪ್ರಕಟಣೆ ತಿಳಿಸಿದೆ.