ದಾವಣಗೆರೆ ಸೆ.25
    ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.27 ರಂದು
‘ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ದಿ’ ಎಂಬ
ಸಂದೇಶದೊಂದಿಗೆ ಆಚರಿಸಲಾಗುತ್ತಿದೆ.
   ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಹರಿಹರೇಶ್ವರ ದೇವಸ್ಥಾನದ
ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸ್ವಚ್ಚ
ಭಾರತ್ ಅಭಿಯಾನದೊಂದಿಗೆ ಆಚರಿಸಲಾಗುವುದು. ಪ್ಲಾಸ್ಟಿಕ್ ಮುಕ್ತ
ಪ್ರವಾಸಿ ತಾಣವನ್ನಾಗಿಸುವ ದೃಷ್ಠಿಯಿಂದ ಸ್ವಚ್ಚತಾ ಪಕ್ವಾಡ ಹಾಗೂ
ಪ್ರಸ್ತುತ ಪ್ರವಾಸೋದ್ಯಮಕ್ಕೆ ಕಂಟಕವಾಗಿರುವ ಕೊರೊನಾ
ವೈರಸ್ ಬಗ್ಗೆ ಅರಿವು ಮೂಡಿಸುವ ಮೂಲಕ ಪ್ರವಾಸೋದ್ಯಮ
ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಗುವುದೆಂದು
ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *