ದಾವಣಗೆರೆ ಸೆ.29
ಅ.01 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸದ್ಯೋಜಾತ ಶಿವಾಚಾರ್ಯ
ಮಹಾಸ್ವಾಮಿಗಳ ಮಠ, ಎಂ.ಸಿ.ಸಿ. ‘ಬಿ’ ಬ್ಲಾಕ್, ವಾಟರ್ ಟ್ಯಾಂಕ್ ಪಾರ್ಕ್ ಎದುರು,
ದಾವಣಗೆರೆ ಇಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2020
ಹಮ್ಮಿಕೊಳ್ಳಲಾಗಿದ್ದು ಕೋವಿಡ್ ನಿಯಮಾನುಸಾರ ಸರಳವಾಗಿ
ಆಚರಿಸಲಾಗುವುದು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಮತ್ತು ಹಿರಿಯ
ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಹಿರಿಯ ನಾಗರಿಕರ ಸಂಘ
ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ
ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಮತ್ತು
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರ
ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು
ಆಯೋಜಿಸಲಾಗಿದ್ದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಬಿ.ಎ.ಬಸವರಾಜ್ ಭೈರತಿ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್
ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ರಾಜಕೀಯ
ಕಾರ್ಯದರ್ಶಿಗಳಾದ ಎಂ.ಪಿ ರೇಣುಕಾಚಾರ್ಯ, ದಾವಣಗೆರೆ ಲೋಕಸಭಾ
ಕ್ಷೇತ್ರದ ಸಂಸದ ಜಿ.ಎಂ ಸಿದ್ದೇಶ್ವರ, ಜಿ.ಪಂ ಅಧ್ಯಕ್ಷೆ ದೀಪಾ ಜಗದೀಶ್,
ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು
ಶಿವಶಂಕರಪ್ಪ, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು,
ವಿಶೇಷ ಆಹ್ವಾನಿತರಾಗಿ ದಾವಣಗೆರೆ ಹರಿಹರ ನಗರಾಭಿವೃದ್ದಿ
ಪ್ರಾಧಿಕಾರದ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು,
ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿಗಳು, ತಾ.ಪಂ.ಅಧ್ಯಕ್ಷರು,
ಮಹಾನಗರಪಾಲಿಕೆಯ ಮಹಾಪೌರರು ಹಾಗೂ
ಮಹಾನಗರಪಾಲಿಕೆಯ ಆಯುಕ್ತರು, ಜನಪ್ರತಿನಿಧಿಗಳು,
ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ