ದಾವಣಗೆರೆ ಅ.05
‘ರಕ್ತವನ್ನು ಸ್ವಯಂ ಪ್ರೇರಿತವಾಗಿ ದಾನಮಾಡಿ ಮತ್ತು
ಕರೋನ ವಿರುದ್ದದ ಹೋರಾಟಕ್ಕೆ ಕೊಡುಗೆಯಾಗಲಿ’ ಎಂಬ
ಘೋಷಣೆಯೊಂದಿಗೆ ಅ.09 ರಂದು ಬೆಳಿಗ್ಗೆ 10 ಗಂಟೆಗೆ
ಕುವೆಂಪು ಕನ್ನಡ ಭವನ, ಆರ್ಟ್ ಕಾಲೇಜು ಹತ್ತಿರ,
ದಾವಣಗೆರೆ ಇಲ್ಲಿ “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ
ದಿನಾಚರಣೆ-2020” ಯನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು
ನಿಯತ್ರಣ ಘಟಕ, ರಕ್ತಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ
ದಾವಣಗೆರೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ
ಬೆಂಗಳೂರು, ವಿವಿಧ ರಕ್ತನಿಧಿ ಕೇಂದ್ರಗಳು
ಇವರುಗಳ ಸಂಯುಕ್ತಾಶ್ರಯದಲ್ಲಿ
ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಸ್
ರಾಘವೇಂದ್ರ ಸ್ವಾಮಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಪದ್ಮ ಬಸವಂತಪ್ಪ, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರಾದ
ಡಾ.ಜೈಪ್ರಕಾಶ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ
ಅಧೀಕ್ಷಕರಾದ ಡಾ.ನೀಲಕಂಠ ಜೆ.ಬಿ, ನಿವಾಸಿ ವೈದ್ಯಾಧಿಕಾರಿ
ಡಾ.ಮಂಜುನಾಥ ಪಾಟೀಲ್, ಕನ್ನಡ ಸಾಹಿತ್ಯ ಪರಿಷತ್ತಿನ
ಅಧ್ಯಕ್ಷರಾದ ಡಾ.ಹೆಚ್.ಎಸ್.ಮಂಜುನಾಥ ಕುರ್ಕಿ, ಜಿಲ್ಲಾ ಏಡ್ಸ್
ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಅಧಿಕಾರಿ
ಡಾ. ಕೆ.ಹೆಚ್.ಗಂಗಾಧರ್, ರಕ್ತ ಭಂಡಾರದ ವೈದ್ಯಾಧಿಕಾರಿ
ಡಾ.ಡಿ.ಹೆಚ್.ಗೀತ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.