ದಾವಣಗೆರೆ ಅ.12
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅ.15
ಮತ್ತು 16 ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ
ಚನ್ನಗಿರಿ ಹಾಗೂ ಜಗಳೂರು ತಾಲ್ಲೂಕು ಪ್ರವಾಸ
ಕೈಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು
ಸಲ್ಲಿಸಬಹುದಾಗಿದೆ.
     ಪೊಲೀಸ್ ನಿರೀಕ್ಷಕರಾದ ಟಿ.ಎಸ್.ಮುರುಗೇಶ್‍ರವರು ಅ.15 ರ
ಬೆಳಿಗ್ಗೆ 10.30 ರಿಂದ ಸಂಜೆ 5.30ರವರೆಗೆÉ ಚನ್ನಗಿರಿ ಪ್ರವಾಸಿ
ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
     ಪೊಲೀಸ್ ನಿರೀಕ್ಷಕರಾದ ಆರ್.ಎಲ್.ಲಕ್ಷ್ಮೀಪತಿರವರು ಅ.16 ರ
ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ ಜಗಳೂರು ಪ್ರವಾಸಿ
ಮಂದಿರದಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ತಾಲ್ಲೂಕು ಮತ್ತು ಜಿಲ್ಲೆಯ ಸರಕಾರಿ
ಕಾರ್ಯಾಲಯಗಳಲ್ಲಿ ನಡೆಯುತ್ತಿರುವ ದುರಾಡಳಿತ,
ವಿಳಂಬ ನೀತಿ, ಹಣ ದುರುಪಯೋಗ, ಸರಕಾರದ
ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು
ತಾರತಮ್ಯ ನೀತಿ ತೋರುವುದರ ಕುರಿತು
ದೂರುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ
ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು
ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ
(ಪ್ರಭಾರ)ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *