ದಾವಣಗೆರೆ ಅ.13
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅ.28 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ ಇಲ್ಲದೇ ಇದ್ದವರು ಪರ್ಯಾಯ ದಾಖಲೆ ಬಳಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಚುನಾವಣಾ ಗುರುತಿನ ಚೀಟಿ ಇಲ್ಲದೇ ಇರುವ ಅರ್ಹ ಮತದಾರರು ಇತರೆ ಪರ್ಯಾಯ ದಾಖಲೆಗಳ ಪೈಕಿ ಈ ಕೆಳಕಂಡ ಯಾವುದಾದರೂ ಒಂದು ದಾಖಲೆ ತೋರಿಸಿ ಮತ ಚಲಾಯಿಸಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್(Pಂಓ) ಕಾರ್ಡ್, ಭಾರತೀಯ ಪಾಸ್‍ಪೋರ್ಟ್. ರಾಜ್ಯ, ಕೇಂದ್ರ ಸರ್ಕಾರ, ಸಾರ್ವಜನಿಕ ವಲಯ, ಸ್ಥಳೀಯ ಸಂಸ್ಥೆಗಳು ಅಥವಾ ಇತರೆ ಖಾಸಗಿ ಕೈಗಾರಿಕಾ ಸಂಸ್ಥೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ. ಸಂಸದರು,ವಿಧಾಸಭಾ ಸದಸ್ಯರು,ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು. ಶಿಕ್ಷಕರು, ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ. ವಿಶ್ವವಿದ್ಯಾನಿಯಲದಿಂದ ನೀಡಿರುವ ಪದವಿ, ಡಿಪ್ಲೊಮಾದ ಮೂಲ ಪ್ರಮಾಣಪತ್ರಗಳು. ಸಕ್ಷಮ ಪ್ರಾಧಿಕಾರದಿಂದ ನೀಡಲಾಗಿರುವ ಅಂಗವಿಕಲ ದೃಢೀಕರಣ ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದೆಂದು ಮಹಾನಗರಪಾಲಿಕೆಯ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.