ದಾವಣಗೆರೆ ಅ.20
ಜಿಲ್ಲೆಯಲ್ಲಿ ಈದ್ ಮಿಲಾದ್ (ಮಿಲಾದುನ್ನಬಿ) ಆಚರಿಸುವ ಬಗ್ಗೆ ವಕ್ಫ್
ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯವರು ಕಡ್ಡಾಯವಾಗಿ
ತೆಗೆದುಕೊಳ್ಳಬೇಕಾದ ಕ್ರಮಗಳು ಈ ಕೆಳಗಿನಂತಿವೆÀ.
ಅ.30 ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ
ನಡೆಯುವ ಸಾಮೂಹಿಕ ಮೆರವಣಿಗೆ (ಜುಲೂಸ್) ಹಾಗೂ ತೆರೆದ
ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ
ನಿಷೇಧಿಸಲಾಗಿದ್ದು, ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ
ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ
ಸಾಂಸ್ಕøತಿಕ ಕಾರ್ಯಕ್ರಮ, ಸಭೆ ಸಮಾರಂಭಗಳನ್ನು
ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಮಸೀದಿಗಳಲ್ಲಿ ಹಾಗೂ ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ
ಕೋವಿಡ್-19ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ
ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ
ಮೂಲಕ ಪ್ರಾರ್ಥನೆ ಸಲ್ಲಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ
ಧ್ವನಿವರ್ಧಕಗಳು, ಡಿಜಿಟಲ್ ಸೌಂಡ್ ಸಿಸ್ಟಮ್ (ಡಿ.ಜೆ.) ಬಳಕೆಯನ್ನು
ನಿಷೇಧಿಸಲಾಗಿದೆ.
ದರ್ಗಾಗಳಿಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿಕೊಂಡು
ಬರಬೇಕು ಹಾಗೂ 60 ವರ್ಷ ಮೇಲ್ಪಟ್ಟ ನಾಗರೀಕರು ಮತ್ತು 10
ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ
ಆಚರಣೆಯನ್ನು ಮಾಡಬೇಕು. ಮತ್ತು ಪ್ರವೇಶದ್ವಾರದ ಬಳಿ
ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಸೂಕ್ತ
ವ್ಯವಸ್ಥೆ ಮಾಡಬೇಕು.
ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ
ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ
ಮುಂತಾದವುಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ ಈ ಎಲ್ಲಾ
ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ವಕ್ಫ್ ಅಧಿಕಾರಿ
ಸೈಯದ್ ಮೊಅಜಂ ಪಾಷ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ
ಮೊಹಮ್ಮದ್ ಸಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ