ದಾವಣಗೆರೆ ಅ.21
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುವ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಬುಧುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೋವಿಡ್-19 ನಿಯಂತ್ರಿಸುವಲ್ಲಿ ಹೆಚ್ಚಿನ ಶ್ರಮಪಡುತ್ತಿರುವುದರಿಂದ ಕೋವಿಡ್ ಸೋಂಕು ನಿಯಂತ್ರಣದ ಹಂತದಲ್ಲಿ ಮುಂದುವರೆದಿದೆ. ಆದಾಗ್ಯೂ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅನುಸರಿಸುವಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ. ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾನ ಅಧಿಕಾರಿಗಳು ತಮ್ಮ ವಿಭಾಗಗಳಲ್ಲಿ ಜಾರಿಗೊಳಿಸುವ ಯೋಜನೆಗಳನ್ನು ಯಶಸ್ವಿಯಾಗಿಸಲು ಹೆಚ್ಚಿನ ಶ್ರಮ ವಹಿಸಬೇಕು. ಅಲ್ಲದೆ ಆರೋಗ್ಯ ಇಲಾಖೆಯ ಇತರೆ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಸಹ ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್.ಎಲ್, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ಮೀನಾಕ್ಷಿ, ಡಾ. ನಟರಾಜ್, ಡಾ.ಮುರಳೀಧರ್, ಡಾ.ಶ್ರೀಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ್ ಎನ್.ಬಾರ್ಕಿ ಮತ್ತು ಜಿಲ್ಲೆಯ ಆಡಳಿತ ವೈದ್ಯಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು