ದಾವಣಗೆರೆ ಅ.21
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಹರಪನಹಳ್ಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಥಮ ವರ್ಷದ ಡಿಪ್ಲೋಮಾ ಸೀಟುಗಳಿಗೆ ನೇರ ದಾಖಲಾತಿ ಮಾಡಿಕೊಳ್ಳಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ..
ಅ.29 ರೊಳಗೆ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಸಂಸ್ಥೆಗೆ ಹಾಜರಾಗಿ, ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ದ್ವಿತೀಯ ಪಿಯುಸಿ ವಿಜ್ಞಾನ, ದ್ವಿತೀಯ ಪಿಯುಸಿ ತಾಂತ್ರಿಕ ವಿಷಯಗಳು ಹಾಗೂ ಐಟಿಐ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಸಹ ಲ್ಯಾಟರಲ್ ಎಂಟ್ರಿ ಸ್ಕೀಮ್ ಮುಖಾಂತರ ನೇರವಾಗಿ 02 ಹಾಗು 03 ನೇ ವರ್ಷದ ಸೆಮಿಸ್ಟರ್ ಡಿಪ್ಲೋಮಾಕ್ಕೆ ಪ್ರವೇಶ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8880932400 ಮೊ.ನಂ: 9902482350, 9844197172 ಕ್ಕೆ ಸಂರ್ಪಕಿಸಬಹುದು ಎಂದು ಹರಪನಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಧ್ರುವ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.