ದಾವಣಗೆರೆ ಅ.21
ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 600 ಮಿ.ಮೀ. ಸರಾಸರಿ ಮಳೆಯಾಗಿದೆ.
ಚನ್ನಗಿರಿ ತಾಲ್ಲೂಕಿನಲ್ಲಿ 2.0 ಮಿ.ಮೀ ವಾಡಿಕೆಗೆ 34.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 4.0 ಮಿ.ಮೀ ವಾಡಿಕೆಗೆ 60.0 ಮಿ.ಮೀ. ಹರಿಹರ ತಾಲ್ಲೂಕಿನಲ್ಲಿ 5.0 ಮಿ.ಮೀ ವಾಡಿಕೆಗೆ 20.0 ಮಿ.ಮೀ. ಹೊನ್ನಾಳಿ ತಾಲ್ಲೂಕಿನಲ್ಲಿ 4.0 ಮಿ.ಮೀ ವಾಡಿಕೆಗೆ 13.0 ಮಿ.ಮೀ. ಜಗಳೂರು ತಾಲ್ಲೂಕಿನಲ್ಲಿ 2.0 ಮಿ.ಮೀ ವಾಡಿಕೆ 46.0 ಮಿ.ಮೀ, ನ್ಯಾಮತಿ ತಾಲ್ಲೂಕಿನಲ್ಲಿ 4.0 ಮಿ.ಮೀ ವಾಡಿಕೆಗೆಗೆ 7.0 ಮಿ.ಮೀ. ವಾಸ್ತವ ಮಳೆಯಾಗಿದ್ದು, ಜಿಲ್ಲೆಯಲ್ಲಿ ಸರಾಸರಿ 3.0 ಮಿ.ಮೀ ವಾಡಿಕೆಗೆ 36.0 ಮಿ.ಮೀ ವಾಸ್ತವ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 35 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.8.75 ಲಕ್ಷ ನಷ್ಟ ಮತ್ತು 30 ಎಕರೆ ಭತ್ತ ಮತ್ತು ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, ರೂ.1.30 ಲಕ್ಷ ಸೇರಿದಂತೆ ಒಟ್ಟು 10.05 ಲಕ್ಷ ನಷ್ಟದ ಅಂದಾಜು ಮಾಡಲಾಗಿದೆ.
ಹರಿಹರ ತಾಲ್ಲೂಕಿನಲ್ಲಿ 50.00 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ. 1.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹೊನ್ನಾಳಿ ತಾಲ್ಲೂಕಿನಲ್ಲಿ 6 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.60 ಸಾವಿರ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 14 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.6 ಲಕ್ಷ, 01 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.1.00 ಲಕ್ಷ ಹಾಗೂ 06 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.2.20 ಲಕ್ಷ ಸೇರಿದಂತೆ ಒಟ್ಟು 9.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಗಳೂರು ತಾಲ್ಲೂಕಿನಲ್ಲಿ 8 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.1.50 ಲಕ್ಷ, 1 ಎಕರೆ ಅಡಿಕೆ ಮತ್ತು 1 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು, ರೂ.90 ಸಾವಿರ ಸೇರಿ ಒಟ್ಟು 2.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ.23.55 ಲಕ್ಷ ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *