ದಾವಣಗೆರೆ ಅ.22
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅ.27 ಮತ್ತು 28 ರಂದು ಹೊನ್ನಾಳಿ ಹಾಗೂ ಹರಿಹರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಟಿ.ಎಸ್.ಮುರುಗೇಶ್‍ರವರು ಅ.27 ರ ಬೆಳಿಗ್ಗೆ 10.30 ರಿಂದ ಸಂಜೆ 1.30 ರವರೆಗೆÉ ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ನ್ಯಾಮತಿ ತಾಲ್ಲೂಕಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಪೊಲೀಸ್ ನಿರೀಕ್ಷಕರಾದ ಆರ್.ಎಲ್.ಲಕ್ಷ್ಮೀಪತಿ ಅವರು ಅ.28 ರ ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ ಹರಿಹರ ಪ್ರವಾಸಿ ಮಂದಿರದಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ (ಪ್ರಭಾರ) ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *