ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಹೊನ್ನಾಳಿಯಲ್ಲಿ ಇಂದು 65ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೃಹರಕ್ಷಕದಳದ ವತಿಯಿಂದ ಮಾನ್ಯ ತಹಸಿಲ್ದಾರ್, ಸರ್ಕಲ್ ಇನ್ಸ್ಪೆಕ್ಟರ್, ಗೃಹರಕ್ಷಕ ದಳದ ಅಧಿಕಾರಿಗಳು ಇವರಗಳ ನೇತೃತ್ವದಲ್ಲಿ ರಾಜಬೀದಿಗಳಲ್ಲಿ ಪಥಸಂಚಲನ ಮಾಡುವುದರ ಮುಖಾಂತರ ಮಾಸ್ಕ್ ಇಲ್ಲದವರಿಗೆ ಮಾಸ್ಕ್ ಗಳನ್ನು ಉಚಿತವಾಗಿ ವಿತರಣೆ ಮಾಡಿದರು. ಅಂತರವನ್ನು ಕಾಯ್ದುಕೊಂಡು, ಸ್ಯಾನಿಟೈಸರ್ ಬಳಸಬೇಕು ಎಂದು ಜನರಿಗೆ ಜಾಗೃತಿಯನ್ನು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಭಾಗಿಯಾದವರು:- ತಾಲೂಕು ದಂಡಾಧಿಕಾರಿಗಳಾದ ತುಷಾರ್ ಬಿ ಹೊಸೂರ್ ರವರು, ಸರ್ಕಲ್ ಇನ್ಸ್ಪೆಕ್ಟರ್ ಟಿ. ದೇವರಾಜ್, ಎಸ್ ಐ ತಿಪ್ಪೇಸ್ವಾಮಿ, ಗೃಹರಕ್ಷಕದಳದ ಅಧಿಕಾರಿಗಳಾದ ಕೆ ನಾಗರಾಜಪ್ಪ, ಮತ್ತು ಗೃಹರಕ್ಷಕದಳದ ಸಿಬ್ಬಂದಿ ವರ್ಗದವರು ಸಹ ಭಾಗಿಯಾಗಿದ್ದರು.