ದಾವಣಗೆರೆ ನ.04
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅವಧಿ ವಿಸ್ತರಣೆಯ ಸದುಪಯೋಗ ಪಡೆದು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250066 ಕ್ಕೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.