ದಾವಣಗೆರೆ ನ. 04
ರಾಜ್ಯ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ನ.07 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ನ. 07 ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು, ಸಂಜೆ 6 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸಚಿವರು ನ. 08 ರಂದು ಬೆಳಿಗ್ಗೆ 9-30 ಗಂಟೆಗೆ ಹಾವೇರಿ ಜಿಲ್ಲೆ ಶ್ರೀ ಕ್ಷೇತ್ರ ಕಾಗಿನೆಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.