ದಾವಣಗೆರೆ ನ.05
ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ
ಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳ
ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇ
ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ
ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ
ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಇರಬೇಕಾದ ಶೈಕ್ಷಣಿಕ
ಅರ್ಹತೆ: ಆಹಾರ ತಂತ್ರಜ್ಞಾನ/ಆಹಾರ ಇಂಜಿನಿಯರಿಂಗ್ನಲ್ಲಿ
ಡಿಪ್ಲೊಮಾ/ಪದವಿಯನ್ನು ಪ್ರತಿಷ್ಠಿತ ರಾಷ್ಟ್ರ/
ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ
ಪಡೆದಿರಬೇಕು.
ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ
ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ,
ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ
3-5 ವರ್ಷಗಳ ಅನುಭವವಿರಬೇಕು. ಒಂದು ವೇಳೆ ಆಹಾರ
ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು
ಲಭ್ಯವಾಗದಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್,
ಡಿಪಿಆರ್ ಸಿದ್ದಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ
ಅನುಭವವುಳ್ಳ ವ್ಯಕ್ತಿಗಳನ್ನು ಪರಿಗಣಿಸಲಾಗುವುದು.
ಅಭ್ಯರ್ಥಿಗಳಿಗೆ ಕನ್ನಡ ಭಾಷಾಜ್ಞಾನ ಅತ್ಯವಶ್ಯಕವಾಗಿದೆ.
ಅರ್ಜಿ ನಮೂನೆಗಳು ಜಂಟಿ ಕೃಷಿ ನಿರ್ದೇಶಕರ ಕಛೇರಿ,
ದಾವಣಗೆರೆಯಲ್ಲಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಯನ್ನು
ನ.18 ರ ಒಳಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆ
ಇವರ ಕಛೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು
(ವಿಷಯ ತಜ್ಞರು) ಜಂಟಿ ಕೃಷಿ ನಿರ್ದೇಶಕರ ಕಛೇರಿ,
ದಾವಣಗೆರೆ, ಮೊಬೈಲ್ ಸಂಖ್ಯೆ: 8277931105 ಇವರನ್ನು
ಸಂಪರ್ಕಿಸಬಹುದೆಂದು ಕೃಷಿ ಜಂಟಿ ನಿರ್ದೇಶಕರಾದ ಶ್ರೀನಿವಾಸ್
ಚಿಂತಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.