ದಾವಣಗೆರೆ ನ.05
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಉದ್ದೇಶಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಹಾಗೂ 4 ಜನ ಸದಸ್ಯರು. ಬಾಲನ್ಯಾಯ ಮಂಡಳಿಗೆ 2 ಜನ ಸದಸ್ಯರನ್ನು (ಒಬ್ಬರು ಮಹಿಳೆ) 3 ವರ್ಷಗಳ ಸದಸ್ಯತ್ವಕ್ಕಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ, ಸೂಚನೆ, ಅಪಿಡವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಲಭ್ಯವಿರುತ್ತದೆ.
ಅರ್ಜಿದಾರರು ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲ ನ್ಯಾಯ ಮಂಡಳಿ ಈ ಎರಡರಲ್ಲಿ ಯಾವುದಾದರೂ ಒಂದಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಅರ್ಜಿಯನ್ನು ಮಾತ್ರ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಒಂದು ವೇಳೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿ ಎರಡಕ್ಕೂ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಭರ್ತಿ ಮಾಡಿದ ಪ್ರತ್ಯೇಕ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ರಿಜಿಸ್ಟ್ರರ್ ಅಂಚೆ ಮೂಲಕ (ಆರ್.ಪಿ.ಎ.ಡಿ) ಅಥವಾ ಮುದ್ದಾಂ ನ.15 ರ ಸಂಜೆ 5.30 ರೊಳಗಾಗಿ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ಬೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬೇಕು.