ದಾವಣಗೆರೆ ನ.09
ಕನ್ನಡ ರಾಜ್ಯೋತ್ಸವದ ಅಂಗವಾಗಿ 2020 ರ ನವೆಂಬರ್ ತಿಂಗಳು
ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು
ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ
ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ
ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ
ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ
ಮಾರಾಟ ಮಳಿಗೆಗಳಲ್ಲಿ ಈ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿ ಕೂಡ
ಶೇ.50 ರಿಯಾಯಿತಿ ಲಭ್ಯವಿದೆ.
ಇದಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು
ಅಂತರ್ಜಾಲದಲ್ಲಿಯೂ ಕೂಡ ಶೇ.50 ರ ರಿಯಾಯಿತಿಯಲ್ಲಿ ಅಂದರೆ
ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಇಲ್ಲಿ ಪುಸ್ತಕಗಳು ವಿಭಾಗದಲ್ಲಿ
ಆಯ್ಕೆ ಮಾಡಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ
ಮೂಲಕ ಪಡೆಯಬಹುದು.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ
ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ
ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿಚಿತ್ರಗಳು,
ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ
ಕನ್ನಡ ಸಾಹಿತ್ಯ ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು
ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360
ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ,
ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನ ಸಾಮಾನ್ಯರಿಗೆ ಸುಲಭ
ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ
ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ
ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.