ದಾವಣಗೆರೆ ನ.10
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್
ನಿಯಂತ್ರಣಕ್ಕೆ ಸಂಬಂಧಿಸಿದಂತೆ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಆಗಿ
ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಆಸ್ಪತ್ರೆಗಳಿಗೆ
ಶುಶ್ರೂಷಕರ 45 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ
ತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ಭರ್ತಿ ಮಾಡಲು ಉದ್ದೇಶಿಸಿದ್ದು,
ಆಸಕ್ತ ಅಭ್ಯರ್ಥಿಗಳಿಗೆ ನ.19 ರಂದು ನೇರ ಸಂದರ್ಶನ
ಏರ್ಪಡಿಸಲಾಗಿದೆ.
ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪಿಯುಸಿ, ನರ್ಸಿಂಗ್ ಕೋರ್ಸ್ ಉತ್ತೀರ್ಣರಾಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 25 ಸಾವಿರ ಸಂಚಿತ ವೇತನ
ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು
ನ.17 ರೊಳಗಾಗಿ ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ
ಪ್ರಮಾಣ ಪತ್ರ ಮೂಲ ಹಾಗೂ ನಕಲು ಪ್ರತಿಗಳ ಜೊತೆಗೆ
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ
ಅಭ್ಯರ್ಥಿಗಳು ನ. 19 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ ಎಸ್.ಎಸ್.ಹೈಟೆಕ್ ಆಸ್ಪತ್ರೆ
ಹತ್ತಿರ ಶ್ರೀರಾಮನಗರ ರಸ್ತೆ ಎನ್.ಸಿ.ಸಿ ಕ್ಯಾಂಪ್ ಹತ್ತಿರ ದಾವಣಗೆರೆ ಇಲ್ಲಿ
ನಡೆಸಲಾಗುವ ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಜಿಲ್ಲಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟೆಯಲ್ಲಿ
ತಿಳಿಸಿದ್ದಾರೆ.