ದಾವಣಗೆರೆ ನ. 13
ಕೋವಿಡ್ ಸೋಂಕು ನಿಯಂತ್ರಿಸಲು ಸಾರ್ವಜನಿಕರು
ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜನರಲ್ಲಿ
ಅರಿವು ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆಯು ಜಿಲ್ಲೆಯಲ್ಲಿ ಎಲ್‍ಇಡಿ ಬೃಹತ್ ಪರದೆ ಹೊಂದಿರುವ ವಿಶೇಷ
ವಾಹನದ ಮೂಲಕ ಹಮ್ಮಿಕೊಂಡಿರುವ ಕೋವಿಡ್ ಜಾಗೃತಿ
ಆಂದೋಲನಕ್ಕೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.
ಬಸವರಾಜ ಅವರು ಹಸಿರು ನಿಶಾನೆ ತೋರುವ ಮೂಲಕ ಚನ್ನಗಿರಿಯ
ತಾಲ್ಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಕೋವಿಡ್ ಸಾಂಕ್ರಾಮಿಕ ಸೋಂಕು ತಡೆಗಟ್ಟುವಲ್ಲಿ ಸಾರ್ವಜನಿಕರು
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ವೈಯಕ್ತಿಯ ಸ್ವಚ್ಛತೆ
ಸೇರಿದಂತೆ ಅನುಸರಿಸಬೇಕಾದ ಎಲ್ಲ ಮುಂಜಾಗ್ರತಾ ಕ್ರಮಗಳ
ಮಾಹಿತಿಯನ್ನು ಒಳಗೊಂಡ ಜಾಗೃತಿಯ ಸಂದೇಶವನ್ನು
ಬಿತ್ತರಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆಯು ಎಲ್‍ಇಡಿ ಬೃಹತ್ ಪರದೆ ಹೊಂದಿರುವ ವಿಶೇಷ ವಾಹನದ
ಮೂಲಕ ಜಾಗೃತಿ ಆಂದೋಲನವನ್ನು ಜಿಲ್ಲೆಯ ಎಲ್ಲ ತಾಲ್ಲೂಕಿನ
ಆಯ್ದ 180 ಗ್ರಾಮಗಳಲ್ಲಿ 10 ದಿನಗಳ ಕಾಲ ಹಮ್ಮಿಕೊಂಡಿದೆ. ಜಿಲ್ಲೆಗೆ

ಇಂತಹ ಎರಡು ಎಲ್‍ಇಡಿ ವಾಹನಗಳನ್ನು ಇಲಾಖೆ ವತಿಯಿಂದ
ವ್ಯವಸ್ಥೆಗೊಳಿಸಿದ್ದು, ಈ ಜಾಗೃತಿ ವಾಹನಗಳಿಗೆ ಜಿಲ್ಲಾ ಉಸ್ತುವಾರಿ
ಸಚಿವರು ಶುಕ್ರವಾರದಂದು ಚನ್ನಗಿರಿಯ ತಾಲ್ಲೂಕು
ಕ್ರೀಡಾಂಗಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ
ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಸದ ಜಿ.ಎಂ. ಸಿದ್ದೇಶ್ವರ್, ಚನ್ನಗಿರಿ ಶಾಸಕರು ಹಾಗೂ ಕೆಎಸ್‍ಡಿಎಲ್
ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಮಾಯಕೊಂಡ
ಶಾಸಕ ಪ್ರೊ. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ.
ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯಕ್, ತಾ.ಪಂ. ಅಧ್ಯಕ್ಷೆ
ಕವಿತಾ ಕಲ್ಲೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಪದ್ಮಾ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ,
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ವಾರ್ತಾ ಮತ್ತು ಸಾರ್ವಜನಿಕ
ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್ ಕುಮಾರ್
ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *