ದಾವಣಗೆರೆ ನ.17
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ
ಎಸ್.ಸುರೇಶ್‍ಕುಮಾರ್ ಇವರು ನ.19 ರಂದು ದಾವಣಗೆರೆ ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ನ.19 ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 5
ಗಂಟೆಗೆ ದಾವಣಗೆರೆಗೆ ಆಗಮಿಸಿ, ಮಾನ್ಯ ಮುಖ್ಯಮಂತ್ರಿಗಳ
ಅಧ್ಯಕ್ಷತೆಯಲ್ಲಿ ನಡೆಯುವ ‘ಸರ್ಕಾರದ ಎಲ್ಲಾ ಸೇವೆಗಳನ್ನು
ಒಂದೇ ಸೂರಿನಡಿ ತರಲು ಬೆಂಗಳೂರು-1, ಕರ್ನಾಟಕ-1 ಮಾದರಿಯಲ್ಲಿ
ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1
ಕೇಂದ್ರಗಳ ಯೋಜನೆಯ ಅನುಷ್ಟಾನವನ್ನು ಪ್ರಾಯೋಗಿಕವಾಗಿ
ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಲೋಕಾರ್ಪಣೆ’ ಮಾಡುವ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ
ದಾವಣಗೆರೆಯಿಂದ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.