ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.52% ರಷ್ಟು ಹಿಂದುಳಿದ ವರ್ಗಗಳ ಸಮುದಾಯದ ಜನಸಂಖ್ಯೆ ಇದ್ದು, ಈ ಸಮುದಾಯದ ಜನರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ. (ಈಗ ತಾವು ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಮಾಡಿರುವಿರಿ)
ರಾಜ್ಯದ 6.5 ಕೋಟಿ ಜನಸಂಖ್ಯೆಯ ಪೈಕಿ ಹಿಂದುಳಿದ ಸಮುದಾಯದ ಜನಸಂಖ್ಯೆ ಮೂರು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸರ್ಕಾರದಲ್ಲಿ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಕನಿಷ್ಠ ಪ್ರಯೋಜನವಾಗುತ್ತಿಲ್ಲ. ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳ ಸಮುದಾಯದ ಎಲ್ಲಾ ಜಾತಿಯವರು ಸೇರಿದಂತೆ ಶೇ.52 ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್‍ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇನೆ.
ಈಗಾಗಲೇ ಕೆಲವು ಸಮುದಾಯದ ಬೇಡಿಕೆಯಂತೆ ಆಯಾ ಸಮುದಾಯದ “ಅಭಿವೃದ್ಧಿ ನಿಗಮ” ಸ್ಥಾಪಿಸಿ, ಸಮುದಾಯಕ್ಕೆ ತಕ್ಕಂತೆ ಹಣ ನೀಡಿಲ್ಲ. ಪ್ರತಿ ಸಮುದಾಯಕ್ಕೂ 100 ಕೋಟಿ ಅನುದಾನ ಒದಗಿಸಬೇಕು, ಈಗಾಗಲೇ ನಿಗಮ ಮಾಡಿರುವ ಸಮುದಾಯಕ್ಕೂ ಹೆಚ್ಚಿನ ಅನುದಾನ ನೀಡಬೇಕು. ಈಗಿರುವ ನಿಗಮಗಳಲ್ಲಿ ಹಣವಿಲ್ಲದೆ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ನಿಜವಾಗಿ ರಾಜ್ಯದ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.52 % ರಷ್ಟು ಮೀಸಲಾತಿಯನ್ನು ಹಿಂದುಳಿದ ವರ್ಗಗಳಿಗೆ ಕಲ್ಪಿಸಲು ರಾಜ್ಯದ ಹಿಂದುಳಿದ ವರ್ಗಗಳ ಪರವಾಗಿ ಈ ಮೂಲಕ ವಿನಂತಿಸುತ್ತೇನೆ.

Leave a Reply

Your email address will not be published. Required fields are marked *