ದಾವಣಗೆರೆ ನ.27
ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಸಾಮಾಜಿಕವಾಗಿ, ಭಾವನಾತ್ಮಕವಾಗಿ ಮತ್ತು ಶೈಕ್ಷಣ ಕವಾಗಿ ಆಗುತ್ತಿರುವ ಹಿನ್ನೆಡೆ ಮತ್ತು ನಷ್ಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಗ್ರಾಮೀಣ ಪ್ರದೇಶಗಳ ಜ್ಞಾನ ಕೇಂದ್ರಗಳಾಗಿ ಹಾಗೂ ಮಕ್ಕಳ ಕಲಿಕೆಗೆ ದಾರಿ ದೀಪವಾಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ’ಓದುವ ಬೆಳಕು’ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಮುಂದಾಗಿದೆ.
ದೇಶದಲ್ಲಿ ಮಕ್ಕಳು ಸಾಮಾಜಿಕವಾಗಿ, ಭಾವನಾತ್ಮಕವಾಗಿ ಹಾಗೂ ಶೈಕ್ಷಣ ಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಶಾಲೆಗಳು ಮುಚ್ಚಿರುವುದರಿಂದ ಕಲಿಕೆಯಲ್ಲಿ ಸಹ ಉಂಟಾಗಿರುವ ನಷ್ಟದ ಜೊತೆಗೆ ಶೈಕ್ಷಣ ಕ ಬೆಳವಣ ಗೆಯೂ ಹಿನ್ನಡೆಯಾಗಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವ ಪ್ರಕಾರ ಮಕ್ಕಳು ಪ್ರಸ್ತುತ ಪರಿಸ್ಥಿತಿಯಿಂದಾಗಿ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ದತಿಗೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‍ಗಳ ಗ್ರಂಥಾಲಯಗಳ ಮೂಲಕ ಮಕ್ಕಳ ಬಾಳಲ್ಲಿ ಆಶಾಕಿರಣ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ.
ಸರ್ಕಾರದ ಆದೇಶದ್ವಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧೀನದಲ್ಲಿದ್ದ 5622 ಗ್ರಂಥಾಲಯಗಳನ್ನು ಗ್ರಾಮೀಣಾಭಿವೃದಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸಲಾಗಿರುತ್ತದೆ. ಹಾಗೂ ಈ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆಗೆ ರಾಜ್ಯ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಸಲಹಾ ಸಮಿತಿಗಳನ್ನು ರಚನೆ ಮಾಡಿ ಆದೇಶಿಸಲಾಗಿದೆ.
ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ 6 ರಿಂದ 18 ವರ್ಷದ ವಯಸ್ಸಿನ ಮಕ್ಕಳಿಗಾಗಿ ಆಯ್ಕೆ ಮಾಡಲಾದ ಪುಸ್ತಕಗಳನ್ನು ಪ್ರತ್ಯೇಕ ವಿಭಾಗ ತೆಗೆದು ಇರಿಸಲಾಗುವುದು.
ಓದುವ ಬೆಳಕು ಕಾರ್ಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿರುವುದರಿಂದ ದಾನಿಗಳು, ಸ್ವಯಂಸೇವಾ ಸಂಸ್ಥೆಯವರು ಹಾಗೂ ಕಾರ್ಪೋರೇಟ್ ಸಂಸ್ಥೆಗಳು ಹೊಸ ಹಾಗೂ ಬಳಸಿದ(ಓದಲು ಯೋಗ್ಯವಾದ) ಪುಸ್ತಕಗಳನ್ನು ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ದಾನ ಮಾಡಲು ಈ ಮೂಲಕ ಕೋರಲಾಗಿದೆ.
ಈ ಕಾರ್ಯಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹಾಗೂ ತಾಲ್ಲೂ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊ ಸಂ : 9480863000, ಉಪ ಕಾರ್ಯದರ್ಶಿ 9480863001, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚನ್ನಗಿರಿ ಮೊ ಸಂ : 9480863100, ದಾವಣಗೆರೆ 9480863105, ಹರಿಹರ 9480863110, ಹೊನ್ನಾಳಿ 9480863120, ಜಗಳೂರು 9480863125, ನ್ಯಾಮತಿ 9743995391 ಇವರನ್ನು ಸಂಪರ್ಕಿಸಬಹುದೆಂದು ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *