ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ
ಅಭಿವೃದ್ದಿ ಇಲಾಖೆ, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ
ಮಕ್ಕಳ ರಕ್ಷಣಾ ಘಟಕ ಹಾಗು ಸರ್ಕಾರಿ ಮಕ್ಕಳ ಪಾಲನಾ
ಸಂಸ್ಥೆಗಳು, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನ.30 ರ
ಸಂಜೆ 5 ಗಂಟೆಗೆ ನಮ್ಮ ಮಕ್ಕಳ ಹಬ್ಬ-2020
ಕಾರ್ಯಕ್ರಮವನ್ನು ಬಾಲಕರ ಸರ್ಕಾರಿ ಬಾಲಮಂದಿರ ಆವರಣ, ಎಂಸಿಸಿ ಬಿ
ಬ್ಲಾಕ್, ದಾವಣಗೆರೆ ಇಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಮತ್ತು
ಸತ್ರ ನ್ಯಾಯಾಧೀಶರಾದ ಗೀತಾ.ಕೆ.ಬಿ ಇವರು ಇವರು
ನೆರವೇರಿಸುವರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ
ಘಟಕದ ಅಧ್ಯಕ್ಷರಾದ ಮಹಾಂತೇಶ ಬೀಳಗಿ ಇವರು ಅಧ್ಯಕ್ಷತೆ
ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್
ನ್ಯಾಯಾಧೀಶರಾದ ಚಂದ್ರಕಲಾ.ಇ, ಹಿರಿಯ ಸಿವಿಲ್ ನ್ಯಾಯಾಧೀಶರು
ಹಾಗೂ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷರದ ಪ್ರಭು
ಎನ್.ಬಡಿಗೇರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿಲ್ಲಾ
ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ, ಮಹಿಳಾ ಮತ್ತು ಮಕ್ಕಳ
ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್, ಜಿಲ್ಲಾ
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವೈ.ರಾಮಾನಾಯ್ಕ್
ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.