ದಾವಣಗೆರೆ ಡಿ.02
ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ
ಬಸವರಾಜ ಇವರು ಡಿ.4 ರಂದು ದಾವಣಗೆರೆ ಜಿಲ್ಲೆಯ ಪ್ರವಾಸ
ಕೈಗೊಳ್ಳಲಿದ್ದಾರೆ.
ಡಿ.4 ರಂದು ಬೆಳಿಗ್ಗೆ 8.30 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ ಅತಿಥಿ ಗೃಹಕ್ಕೆ
ಆಗಮಿಸುವರು. ಬೆಳಿಗ್ಗೆ 9 ಗಂಟೆಗೆ ಜಿ.ಎಂ.ಐ.ಟಿ ಅತಿಥಿ ಗೃಹದಲ್ಲಿ
ದಾವಣಗೆರೆ ಸ್ಮಾರ್ಟ್‍ಸಿಟಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಹಾಗೂ 10.30 ಕ್ಕೆ ದಾವಣಗೆರೆ ಜಿಲ್ಲೆಯ ಗ್ರಾಮಸ್ವರಾಜ್
ಸಮಾವೇಶದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ
ಬೆಂಗಳೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.