ದಾವಣಗೆರೆ ಡಿ. 04
ತಾಲ್ಲೂಕು ಪಂಚಾಯತಿ ಕಟ್ಟಡ ಹಾಗೂ ಸಂಜೀವಿನಿ ಸ್ತ್ರೀಶಕ್ತಿ ಸ್ವ-
ಸಹಾಯ ಸಂಘಗಳ ಉತ್ಪನ್ನ ಮಾರಾಟ ಮಳಿಗೆಗಳ ನಿರ್ಮಾಣ
ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ
ಕೆ.ಎಸ್. ಈಶ್ವರಪ್ಪ ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ
ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಗರದಲ್ಲಿ 02 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಪಂಚಾಯತಿ
ಕಟ್ಟಡ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ಸಂಜೀವಿನಿ ಸ್ತ್ರೀಶಕ್ತಿ ಸ್ವ-
ಸಹಾಯ ಸಂಘಗಳ ಉತ್ಪನ್ನ ಮಾರಾಟ ಮಳಿಗೆಗಳ ನಿರ್ಮಾಣಕ್ಕೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.
ಈಶ್ವರಪ್ಪ ಅವರು ಶಂಕುಸ್ಥಾಪನೆ ನೆರವೇರಿಸುವುದರ ಜೊತೆಗೆ
ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ
ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಶಾಸಕರು ಹಾಗೂ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.
ರೇಣುಕಾಚಾರ್ಯ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್,
ಉಪಾಧ್ಯಕ್ಷೆ ಸಾಕಮ್ಮ ಗಂಗಾಧರಪ್ಪ, ಜಿಲ್ಲಾಧಿಕಾರಿ ಮಹಾಂತೇಶ್
ಬೀಳಗಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ,
ಉಪಕಾರ್ಯದರ್ಶಿ ಬಿ. ಆನಂದ್ ಸೇರಿದಂತೆ ಜಿಲ್ಲಾ ಪಂಚಾಯತ್ ವಿವಿಧ ಸ್ಥಾಯಿ
ಸಮಿತಿಗಳ ಅಧ್ಯಕ್ಷರು, ಜಿ.ಪಂ. ಸದಸ್ಯರು, ತಾ.ಪಂ. ಅಧ್ಯಕ್ಷರು
ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.