ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿ.12 ಹೊನ್ನಾಳಿ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯು ದೇವನಾಯ್ಕನಹಳ್ಳಿ ಗ್ರಾಮದ ನೌಕರರ ಸಭಾ ಭವನದಲ್ಲಿ ಇಂದು ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರು ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ ನೇತೃತ್ವದಲ್ಲಿ ಸಭೆ ನಡೆಯಿತು.

ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರು ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯಾರೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತರೆ ಅವರ ಪರವಾಗಿ ಮತವನ್ನು ಹಾಕಿ ಗೆಲ್ಲಿಸಬೇಕು ಎಂದು ಹೇಳಿದರು.

ನಂತರ ಡಿ.ಜಿ ಶಾಂತನಗೌಡ್ರುರವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅವಧಿಯಲ್ಲಿ ಮಾಡಿದ ಕೆಲಸಗಳನ್ನು ,ಮತ್ತು ನಾನು ಶಾಸಕರಾದ ಅವಧಿಯಲ್ಲಿ ಮಾಡಿದ ಕೆಲಸವನ್ನ ಇಟ್ಟುಕೊಂಡು ಚುನಾವಣಾ ಪ್ರಚಾರ ಮಾಡಬಹುದು ಎಂದು ಹೇಳುತ್ತಾ, ಬೂತ್ ಮಟ್ಟದ ಕಾರ್ಯಕರ್ತರುಗಳೆ ನಮ್ಮ ಪಕ್ಷದ ಬೆನ್ನೆಲಬು ಹಾಗಾಗಿ ದಿನಾಂಕ 22-12-2020ರಂದು ನಡೆಯುವ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಮ್ಮ ಕಾರ್ಯಕರ್ತರುಗಳು ಪಕ್ಷದ ಪರವಾಗಿ ಚುನಾವಣೆಗೆ ನಿಂತಾಗ ಪ್ರತಿಯೊಬ್ಬರು ಒಗ್ಗಟ್ಟಾಗಿ ಗೆಲ್ಲಿಸಿದರೆ ಪಕ್ಷ ಬಲವರ್ಧನೆಗೆ ಹಾಗೂ ಮುಂದೆ ಬರುವ ಎಲ್ಲಾ ಚುನಾವಣೆಗೆ ಭದ್ರಬುನಾದಿಯಾಗುತ್ತದೆ ಎಂದು ಹೇಳಿದರು.

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ನಮ್ಮ ಪಕ್ಷದ ಕಾರ್ಯಕರ್ತರುಗಳು ಹಣವನ್ನು ಕೊಟ್ಟು ಕೆಲಸವನ್ನು ಮಾಡಿಸಿಕೊಂಡು ಹೋಗುತ್ತಿದ್ದಿರಿ ಎಂದು ಅದು ನನ್ನ ಗಮನಕ್ಕೆ
ಬಂದಿದೆ, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸರಿಯಾಗಿ ಯಾರು ಸ್ಪಂದನೆ ಮಾಡುತ್ತಿಲ್ಲಾ ಎಂದು ಪ್ರಶ್ನೆಯು ಸಹ ಇದೆ. ಇದಕ್ಕೆ ಉತ್ತರವಾಗಿ ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರುರವರು ಮಾತನಾಡಿ ಪ್ರತಿದಿನ ನಮ್ಮ ರೈಸ್ ಮಿಲ್ ನಲ್ಲಿ ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಅಧಿಕಾರವಿರಲಿ ಅಥವಾ ಇಲ್ಲದೆಇರಲಿ, ನನ್ನ ರಾಜಕೀಯ ಜೀವನ ಇರುವವರೆಗೂ ಎರಡು ತಾಲೂಕುಗಳ
ಜನರ ಸೇವೆ ಮಾಡಲಿಕ್ಕೆ ಸದಾ ನಮ್ಮ ಮನೆ ತೆರೆದಿರುತ್ತದೆ ಎಂದು ಪಕ್ಷದ ಕಾರ್ಯಕರ್ತರುಗಳಿಗೆ ಧೈರ್ಯ ತುಂಬಿ
ಮಾತನ್ನು ಮುಕ್ತಾಯಗೊಳಿಸಿದರು.

ಡಿ.ಜಿ ಶಾಂತನಗೌಡ್ರು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪ, ತಾಲೂಕು ಅಧ್ಯಕ್ಷರುಗಳಾದ ಸಣ್ಣಕ್ಕಿ
ಬಸವನಗೌಡ, ಹೆಚ್.ಎ ಗದ್ದಿಗೇಶಣ್ಣ, ಜೆಡ್.ಪಿ ವಿಶ್ವನಾಥ್, ಹೆಚ್.ಎ ಉಮಾಪತಿ, ಮಹಿಳಾ ಅಧ್ಯಕ್ಷರಾದ ಪುಷ್ಪಲಾತ
ರವೀಶ್, ನರಸಪ್ಪ, ಯುವ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಧುಗೌಡ, ರಂಜಿತ್, ಇನ್ನೂ ಮುಂತಾದ ಮುಖಂಡರುಗಳು ಮತ್ತು ಪ್ಷದ ಕಾರ್ಯಕರ್ತರುಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *