ದಾವಣಗೆರೆ ಡಿ. 15
ಜಿಲ್ಲೆಯಲ್ಲಿ ನಡೆಯುವ ಎರಡು ಹಂತಗಳ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಆಯಾ ತಾಲ್ಲೂಕುಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಗದಿತ ದಿನಾಂಕಗಳಂದು ಮದ್ಯ ಮಾರಾಟ ನಿಷೇಧಿಸುವ ಮೂಲಕ, ಶುಷ್ಕ ದಿವಸವೆಂದು ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯತ್ ಮೊದಲನೆ ಹಂತದಲ್ಲಿ ಚುನಾವಣೆ ನಡೆಯುವ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕುಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿ. 20 ರಂದು ಸಂಜೆ 05 ಗಂಟೆಯಿಂದ ಡಿ. 22 ರಂದು ಸಂಜೆ 5 ಗಂಟೆಯವರೆಗೆ ಶುಷ್ಕ ದಿವಸವೆಂದು ಘೋಷಿಸಲಾಗಿದೆ.
ಎರಡನೆ ಹಂತದಲ್ಲಿ ಚುನಾವಣೆ ನಡೆಯುವ ಹರಿಹರ, ಚನ್ನಗಿರಿ ಮತ್ತು ನ್ಯಾಮತಿ ತಾಲ್ಲೂಕುಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿ. 25 ರಂದು ಸಂಜೆ 5 ಗಂಟೆಯಿಂದ ಡಿ. 27 ರಂದು ಸಂಜೆ 5 ಗಂಟೆಯವರೆಗೆ ಶುಷ್ಕ ದಿವಸವೆಂದು ಘೋಷಿಸಲಾಗಿದೆ.
ಶುಷ್ಕ ದಿವಸವೆಂದು ಘೋಷಿಸಿರುವ ಅವಧಿಯಲ್ಲಿ ಎಲ್ಲ ಮದ್ಯ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನಸಾರ ವ್ಯವಸ್ಥಾಪಕರು ಮುಚ್ಚಬೇಕು ಹಾಗೂ ಮೊಹರು ಮಾಡಿ ಅದರ ಕೀಯನ್ನು ಸಂಬಂಧಪಟ್ಟ ತಾಲ್ಲೂಕಿನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರಿಗೆ ಒಪ್ಪಿಸಬೇಕು. ಸಂಬಂಧಪಟ್ಟ ಅಬಕಾರಿ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *