ದಾವಣಗೆರೆ ಜ. 01
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಜ. 05 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅನಂತ ಹೆಗಡೆ ಆಶೀಸರ ಅವರು ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಅರಣ್ಯ ಪರಿಸರ ಜೀವ ವೈವಿಧ್ಯ ಸಂರಕ್ಷಣೆ ಅಭಿವೃದ್ಧಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವರು. ನಂತರ ಬೆ. 12.30 ಗಂಟೆಗೆ ಇದೇ ಸ್ಥಳದಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡುವರು. ಮಧ್ಯಾಹ್ನ 01 ಗಂಟೆಗೆ ದಾವಣಗೆರೆ ನಗರಪಾಲಿಕೆ ಆಯುಕ್ತರು, ಮೇಯರ್ ಹಾಗೂ ನಗರ ಜೀವವೈವಿಧ್ಯ ನಿರ್ವಹಣಾ ಸಮಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಸಮಾಲೋಚನೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ, ಸ್ಥಳ ಭೇಟಿ ಕೈಗೊಂಡು, ಮಧ್ಯಾಹ್ನ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
