ದಾವಣಗೆರೆ ಜ.02
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ
ಕೆ.ಎಸ್.ಈಶ್ವರಪ್ಪ ಇವರು ಜ.6 ರಂದು ದಾವಣಗೆರೆ ಜಿಲ್ಲೆ ಪ್ರವಾಸ
ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸಿ,
ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ
4 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ
ಆಯೋಜಿಸಲಾಗಿರುವ ಗ್ರಾಮೀಣಾಭಿವೃದ್ದಿ ಮತ್ತು
ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮ ಮತ್ತು
ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ
ಪಾಲ್ಗೊಳ್ಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ
ಸಿ.ಎನ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.