ದಾವಣಗೆರೆ ಜ.04
ಎಸ್.ಆರ್. ಉಮಾಶಂಕರ್ ಸರ್ಕಾರದ ಪ್ರಧಾನ ಕಾರ್ಯದರ್ಶಿ,
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ದಾವಣಗೆರೆ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇವರು ಜನವರಿ 07 ಹಾಗೂ 08
ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜನವರಿ 07 ರ ಗುರುವಾರ ಮಧ್ಯಾಹ್ನ 12 ಗಂಟೆಗೆ
ದಾವಣಗೆರೆಗೆ ಆಗಮಿಸುವ ಅವರು ಮಧ್ಯಾಹ್ನ 12.30ಕ್ಕೆ ಸ್ಮಾರ್ಟ್
ಸಿಟಿ ಕಛೇರಿಯಲ್ಲಿ ಬೋರ್ಡ್ ಮೀಟಿಂಗ್‍ನಲ್ಲಿ ಪಾಲ್ಗೊಂಡು,
ಮಧ್ಯಾಹ್ನ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ
ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ
ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜನವರಿ 08 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ
ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ
ಪರಿಷ್ಕರಣೆ 2021 ರ ಸಂಬಂಧ ಹರಿಹರ, ದಾವಣಗೆರೆ ಉತ್ತರ,
ದಾವಣಗೆರೆ ದಕ್ಷಿಣ ಮತ್ತು ಮಾಯಕೊಂಡ ವಿಧಾನ ಸಭಾ
ಕ್ಷೇತ್ರಗಳಿಗೆ ಭೇಟಿ ನೀಡಿ ಸಂಜೆ 5.30 ಕ್ಕೆ ಬೆಂಗಳೂರಿಗೆ
ಮರುಪ್ರಯಾಣ ಬೆಳೆಸಲಿದ್ದಾರೆ ಎಂದು ಅವರ ವಿಶೇಷ
ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed