ಜಿಲ್ಲಾ ಪ್ರವಾಸ
ದಾವಣಗೆರೆ ಜ. 25
ಮಾಜಿ ಮುಖ್ಯಮಂತ್ರಿಗಳು, ಬೃಹತ್ ಮತ್ತು ಮಧ್ಯಮ
ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು ಹಾಗೂ
ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ
ಇವರು ಜ.27 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 11
ಗಂಟೆಗೆ ದಾವಣಗೆರೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ
ಸಭಾಂಗಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ
ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಹಾಗೂ
ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸುವರೆಂದು
ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಗನ್ನಾಥ ಬಂಗೇರ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.