ಮೀಸಲಾತಿ ನಿಗದಿ
ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ
ಮೀಸಲಾತಿ ನಿಗದಿ
ದಾವಣಗೆರೆ ಜ. 27
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ
ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ
ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ
ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ
ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ
ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸುವ
ಪ್ರಕ್ರಿಯೆಯು ಬುಧವಾರ ಜಿಲ್ಲಾಡಳಿತ ಭವನದ ತುಂಗ
ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ
ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿ
ಪೂಜಾರ ವೀರಮಲ್ಲಪ್ಪ, ಚುನಾವಣಾ ತಹಶೀಲ್ದಾರ್ ಪ್ರಸಾದ್
ಇತರೆ ಅಧಿಕಾರಿಗಳು ಇದ್ದರು.