ದಾವಣಗೆರೆ ಜ. 03
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇ
ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್
ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ
ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆ
ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 75%
ಇತರೆ ಜನಾಂಗದ ವಿದ್ಯಾರ್ಥಿಗಳಿಗೆ 25% ಅವಕಾಶ ಇದ್ದು,
ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಫೆ. 15
ರೊಳಗಾಗಿ ಈ ಕೆಳಕಂಡ ಕಛೇರಿಗಳಲ್ಲಿ ಅರ್ಜಿಗಳನ್ನು
ಪಡೆದು ಸಲ್ಲಿಸಬಹುದಾಗಿದೆ.
   ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ
ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, ದಾವಣಗೆರೆ-8861042302.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ,
ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 9743320041.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ,
ಗುತ್ತೂರು ಕಾಲೋನಿ,ಹರಿಹರ, ದಾವಣಗೆರೆ-9743320041.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ,
ಕೆರೆಬಿಳಚಿ, ದಾವಣಗೆರೆ-9740064732. ಅಲ್ಪಸಂಖ್ಯಾತರ ಮೆಟ್ರಿಕ್
ನಂತರ ಬಾಲಕ ವಿದ್ಯಾರ್ಥಿನಿಲಯ, ಜಗಳೂರು ದಾವಣಗೆರೆ –

  1. ತಾಲ್ಲೂಕು ವಿಸ್ತಾರಣಾಧಿಕಾರಿಗಳು,
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಉಪ ವಿಭಾಗ
    ಮೊ: 7846062067 ಇಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದ್ದು ಹೆಚ್ಚಿನ
    ಮಾಹಿತಿಗಾಗಿ ಜಿಲ್ಲಾ ಕಛೇರಿ ದೂರವಾಣಿ :08192-250022 ನ್ನು
    ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
    ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *