ದಾವಣಗೆರೆ,ಫೆ.11
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರ
ಸಂಯುಕ್ತಾಶ್ರಯದಲ್ಲಿ ಫೆ.18 ರ ಗುರುವಾರ ಬೆಳಿಗ್ಗೆ 10
ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಟಿ.ಬಿ. ಸರ್ಕಲ್ ಹತ್ತಿರದ ಸರ್ಕಾರಿ
ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳÀವನ್ನು
ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು
ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ,
ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ ಅಥವಾ ಬಿ.ಬಿ.ಎಂ, ಬಿ.ಸಿ.ಎ ಹಾಗೂ ಸ್ನಾತಕೋತ್ತರ
ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ
ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಫೆ.18 ರಂದು ಕನಿಷ್ಠ 10
ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಸರ್ಕಾರಿ
ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿರುವ
ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳದ
ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ,
ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹೆಚ್ಚಿನ
ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-259446, 6361550016,
9743636369 7406323294 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ
ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ
ಕೆ.ಎನ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.