ಅರ್ಜಿ ಅವಧಿ ವಿಸ್ತರಣೆ
ದಾವಣಗೆರೆ,ಫೆ.11
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್
ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್
ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.14 ರವರೆಗೆ
ವಿಸ್ತರಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ
ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ
ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,
2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗ ಮತ್ತು
ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ
ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಅವಧಿಯನ್ನು ಫೆ.14
ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಪ್ರವರ್ಗ-
1 (ಎಸ್.ಸಿ. ಮತ್ತು ಎಸ್.ಟಿ) ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ,
2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆಗೆÉ ರೂ.1
ಲಕ್ಷದ ಮಿತಿಯಲ್ಲಿರಬೇಕು. ತಾಲ್ಲೂಕುವಾರು
ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ
ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ
ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ
ವೆಬ್‍ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನ್ನು
ಸಂಪರ್ಕಿಸಬಹುದಾಗಿದ್ದು ತಾಂತ್ರಿಕ
ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ-ಮೇಲ್
ಮುಖಾಂತರ ಅಥವಾ ಅಗತ್ಯ ದಾಖಲೆಗಳೊಂದಿಗೆ ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು
ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ
ಸಹಾಯವಾಣಿ ಸಂಖ್ಯೆ 080-8050370006 ಕ್ಕೆ ಕರೆ ಮಾಡಬಹುದು
ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ
ಜಿಲ್ಲಾಧಿಕಾರಿಗಳಾದ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.