ದಾವಣಗೆರೆ ಫೆ.13
ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ
ಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತ
ಸೇವಾಲಾಲ್ರವರ 282ನೇ ಜಯಂತಿ ಕಾರ್ಯಕ್ರಮವನ್ನು
ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕ
ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತ
ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ,
ಬೆಂಗಳೂರು ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ
ಸಮಿತಿ ಸೂರಗೊಂಡನಕೊಪ್ಪ ಇವರ
ಸಂಯುಕ್ತಾಶ್ರಾಯದಲ್ಲಿ ಈ ಕಾರ್ಯಕ್ರಮವನ್ನು
ಏರ್ಪಡಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್
ಯಡಿಯೂರಪ್ಪ ಇವರು ಜಯಂತ್ಯೋತ್ಸವದ
ಉದ್ಘಾಟನೆಯನ್ನು ನೆರವೇರಿಸುವರು. ಮುಖ್ಯಮಂತ್ರಿಯವರ
ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ
ವಿಧಾನಸಭಾಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ
ಅಧ್ಯಕ್ಷತೆ ವಹಿಸುವರು. ಸಮಾಜ ಕಲ್ಯಾಣ ಸಚಿವರಾದ
ಬಿ.ಶ್ರೀರಾಮುಲು ಪುಷ್ಪಾರ್ಚನೆ ಮಾಡುವರು. ನಗರಾಭಿವೃದ್ದಿ
ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ
ಸಭಾಮಂಟಪ ಲೋಕಾರ್ಪಣೆಯನ್ನು ಮಾಡುವರು.
ಮುಖ್ಯಅತಿಥಿಗಳಾಗಿ ಉಪಮುಖ್ಯಮಂತ್ರಿಗಳು ಮತ್ತು
ಲೋಕೋಪಯೋಗಿ ಸಚಿವರಾದ ಗೋವಿಂದ ಎಂ ಕಾರಜೋಳ,
ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್
ಎಸ್ ಸವದಿ, ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಐ.ಟಿ
ಮತ್ತು ಬಿ.ಟಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್
ಅಶ್ವತ್ ನಾರಾಯಣ್, ಪಶುಸಂಗೋಪನೆ ಸಚಿವರಾದ ಪ್ರಭು
ಬಿ.ಚವ್ಹಾಣ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ
ಸಿದ್ದರಾಮಯ್ಯ, ವಿಧಾನ ಪರಿಷತ್ನ ವಿರೋಧ ಪಕ್ಷದ
ನಾಯಕರಾದ ಎಸ್.ಆರ್ ಪಾಟೀಲ್, ಕುಡಚಿ ವಿಧಾನಸಭಾ ಕ್ಷೇತ್ರದ
ಶಾಸಕರು ಹಾಗೂ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ
ಅಧ್ಯಕ್ಷರಾದ ಪಿ.ರಾಜೀವ್, ದಾವಣಗೆರೆ ಕ್ಷೇತ್ರದ ಲೋಕಸಭಾ
ಸದಸ್ಯರಾದ ಜಿ.ಎಂ ಸಿದ್ದೇಶ್ವರ,
ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯರಾದ ಬಿ.ವೈ
ರಾಘವೇಂದ್ರ, ದಾವಣಗೆರೆ ಜಿ.ಪಂ ಅಧ್ಯಕ್ಷೆ ಕೆ.ವಿ
ಶಾಂತಕುಮಾರಿ, ಕಲರ್ಬುಗಿ ಲೋಕಸಭಾ ಕ್ಷೇತ್ರದ
ಸಂಸದರಾದ ಡಾ.ಉಮೇಶ್.ಜಿ.ಜಾಧವ್, ಕರ್ನಾಟಕ ಸಾಬೂನು
ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಹಾಗೂ ಚನ್ನಗಿರಿ
ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಮಾಡಾಳ್
ವಿರುಪಾಕ್ಷಪ್ಪ, ಮಲೆನಾಡು ಅಭಿವೃದ್ದಿ ಮಂಡಳಿಯ
ಅಧ್ಯಕ್ಷರಾದ ಗುರುಮೂರ್ತಿ, ಕರ್ನಾಟಕ ಮಹರ್ಷಿ ವಾಲ್ಮೀಕಿ
ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು
ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ವಿ
ರಾಮಚಂದ್ರ, ಮಾಯಕೊಂಡ ವಿಧಾನಸಭಾ ಕ್ಷೇತ್ರದ
ಶಾಸಕರು ಹಾಗೂ ಡಾ.ಬಾಬು ಜಗಜೀವನ್ರಾವ್ ಚರ್ಮ ಕೈಗಾರಿಕಾ
ಅಭಿವೃದ್ದಿ ನಿಗಮದ ಅಧ್ಯಕ್ಷರು ಪ್ರೊ.ಲಿಂಗಣ್ಣ, ದಕ್ಷಿಣ
ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಹಾಲಿ
ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರು
ಹಾಗೂ ಹೂವಿನ ಹಡಗಲಿ ಕ್ಷೇತ್ರದ ಶಾಸಕರಾದ
ಪಿ.ಟಿ.ಪರಮೇಶ್ವರ ನಾಯ್ಕ, ಹಗರಿಬೊಮ್ಮನಹಳ್ಳಿ
ವಿಧಾನಸಭಾಕ್ಷೇತ್ರದ ಶಾಸಕರಾದ ಎಸ್.ಭೀಮಾನಾಯ್ಕ,
ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಮಪ್ಪ
ಲಮಾಣಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ
ಶಾಸಕರಾದ ಕೆ.ಬಿ ಅಶೋಕ್ ನಾಯ್ಕ್, ನಾಗಠಾಣ ವಿಧಾನಸಭಾ
ಕ್ಷೇತ್ರದ ಶಾಸಕರಾದ ದೇವಾನಂದ್ ಫೂಲ್ಸಿಂಗ್ ಚೌವ್ಹಾಣ್,
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಅವಿನಾಶ್
ಜಾಧವ್, ವಿಧಾನ ಪರಿಷತ್ ಶಾಸಕರು ಹಾಗೂ ಸಂತಸೇವಾಲಾಲ್
ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ
ಸಚಿವರಾದ ರುದ್ರಪ್ಪ.ಎಂ.ಲಮಾಣಿ, ನ್ಯಾಮತಿ ತಾ.ಪಂ
ಅಧ್ಯಕ್ಷರು, ಜಿ.ಪಂ ಸದಸ್ಯರು ಹಾಗೂ ತಾ.ಪಂ ಸದಸ್ಯರು
ಪಾಲ್ಗೊಳ್ಳುವರು.
ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ
ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆಯ
ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ
ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಹಾಗೂ ಕ.ತಾ.ಅ.ನಿ.ನಿ
ವ್ಯವಸ್ಥಾಪಕ ನಿರ್ದೇಶಕರು, ಸಂತ ಸೇವಾಲಾಲ್ ಜನ್ಮಸ್ಥಾನ
ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು
ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.