ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಎನ್.ಎಸ್.ಯು.ಐ ನ ರಾಜ್ಯ ಉಪಾಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಆದ ಶ್ರೀ ಚೇತನ್ ಗೌಡರವರನ್ನು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಹಲವಾರು ವರ್ಷಗಳಿಂದ ಒಕ್ಕಲಿಗ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದ ಇವರು ಕೋವಿಡ್-19 ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ ಡೌನ್ ಸಮಯದಲ್ಲಿ ಚೇತನ್ ಗೌಡರವರ ನೇತೃತ್ವದ ಒಕ್ಕಲಿಗರ ಯುವ ವೇದಿಕೆ ಹಾಗೂ ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಕೂಲಿ ಕಾರ್ಮಿಕರು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದಿನ ನಿತ್ಯದ ಸಾಮಾಗ್ರಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿದ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ಹಾಗೂ ಪ್ರಮುಖ ಒಕ್ಕಲಿಗ ಮುಖಂಡರುಗಳು ಸರ್ವಾನುಮತದಿಂದ ಒಪ್ಪಿ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಆಯ್ಕೆಯಾದ 21 ನಿರ್ದೇಶಕರುಗಳ ಪೈಕಿ ಚೇತನ್ ಗೌಡ ರವರು ಅತೀ ಕಿರಿಯ ವಯಸ್ಸಿನ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Leave a Reply

Your email address will not be published. Required fields are marked *