ದಾವಣಗೆರೆ. ಫೆ 16
ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ
ರಾಜ್ಯಪಾಲರು ಹಾಗೂ ಬಿಜೆಪಿಯ ಪ್ರಮುಖ ಹಿತೈಷಿಗಳೂ ಆಗಿದ್ದ
ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ಅವರ ನಿಧನ
ದೇಶಕ್ಕೆ ತುಂಬಲಾರದ ನಷ್ಟವಾಗಿದೆ.
ಆರ್.ಎಸ್.ಎಸ್‍ನ ನಿಷ್ಠಾಂವಂತ ಕಾರ್ಯಕರ್ತರಾಗಿ ಭಾರತೀಯ
ಜನತಾ ಪಕ್ಷದ ಸಂಘಟನೆಯ ಪ್ರಮುಖ ಪಾತ್ರ ವಹಿಸಿದ್ದರು.
ಪಂಜಾಬ್ ಮತ್ತು ಹರಿಯಾಣ ರಾಜ್ಯದ ಹೈಕೋರ್ಟ್‍ನ ಮುಖ್ಯ
ನ್ಯಾಯಮೂರ್ತಿಗಳಾಗಿ ಹಾಗೂ ಸುಪ್ರೀಂ ಕೋರ್ಟ್‍ನಲ್ಲೂ
ನ್ಯಾಯಮೂರ್ತಿಯಾಗಿದ್ದ ರಾಮಜೋಯಸ್ ಅವರು ದೇಶದ
ಕೆಲವು ಐತಿಹಾಸಿಕ ತೀರ್ಪುಗಳನ್ನು ನೀಡುದ ಪ್ರಮುಖ
ನ್ಯಾಯಮೂರ್ತಿಗಳ ಸಾಲಿನಲ್ಲಿ ನಿಲ್ಲುತ್ತಾರೆ.
ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ
ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ
ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *