ವಿಲೇವಾರಿ

ದಾವಣಗೆರೆ ಫೆ.19
       ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ
ಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯ
ಕಾರ್ಯಕ್ರಮವನ್ನು ಫೆ. 20 ರಂದು ಜಗಳೂರು
ತಾಲ್ಲೂಕಿನ ಸೊಕ್ಕೆ ಹೋಬಳಿ ಅಗಸನಹಳ್ಳಿ ಗ್ರಾಮದಲ್ಲಿ
ಹಮ್ಮಿಕೊಳ್ಳಲಾಗಿರುತ್ತದೆ.
     ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ
ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ
ಸೇವೆಗಳು/ಯೋಜನೆಗಳಾದ ಪೌತಿ ಖಾತೆ ಬದಾಲಾವಣೆ,
ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ,
ಅತಿವೃಷ್ಠಿ/ಬರಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ
ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಹಾಗೂ
ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಈ
ದಿನಾಂಕದಂದು ಇತ್ಯರ್ಥಪಡಿಸಲಾಗುವುದು.
       ಅದೇ ದಿನದಂದು ಉಳಿದ ತಾಲ್ಲೂಕುಗಳಲ್ಲಿ
ತಹಶೀಲ್ದಾರರುಗಳು ಹಾಗೂ ತಾಲ್ಲೂಕು ಮಟ್ಟದ ಇತರೆ
ಅಧಿಕಾರಿಗಳು ದಾವಣಗೆರೆ ತಾಲ್ಲೂಕಿನ ಮಾಯಕೊಂಡ
ಹೋಬಳಿಯ ಅತ್ತಿಗೆರೆ ಗ್ರಾಮ, ಹರಿಹರ ತಾಲ್ಲೂಕಿನ
ಮಲೇಬೆನ್ನೂರು ಹೋಬಳಿಯ ನಿಟ್ಟೂರು ಗ್ರಾಮ, ಹೊನ್ನಾಳಿ
ತಾಲ್ಲೂಕಿನ ಸಾಸ್ವೆಹಳ್ಳಿ-2 ಹೋಬಳಿಯ ಕೂಲಂಬಿ ಗ್ರಾಮ,
ಚನ್ನಗಿರಿ ತಾಲ್ಲೂಕಿನ ಉಬ್ರಾಣಿ ಹೋಬಳಿಯ ದುರ್ವಿಗೆರೆ ಗ್ರಾಮ,
ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಚಿನ್ನಿಕಟ್ಟಿ
ಗ್ರಾಮ, ಈ ಗ್ರಾಮಗಳಲ್ಲಿ ಸಹಾ ಗ್ರಾಮವಾಸ್ತವ್ಯ
ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *