ಸುತ್ತ ನಿಷೇಧಾಜ್ಞೆ
ದಾವಣಗೆರೆ ಜಿಲ್ಲೆಯಲ್ಲಿ ಫೆ.28 ರಂದು 33 ಪರೀಕ್ಷಾ
ಕೇಂದ್ರಗಳಲ್ಲಿ ನಡೆಯುವ ಪ್ರಥಮ/ದ್ವಿತೀಯ ದರ್ಜೆ
ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು
ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ
ಕೇಂದ್ರ ಸುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ
ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ
ಹೊರಡಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲು
ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಲೋಕಸೇವಾ
ಆಯೋಗ ಸೂಚಿಸಿರುವ ಆದೇಶದ ಮೇರೆಗೆ ಈ ಕ್ರಮ
ತೆಗೆದುಕೊಳ್ಳಲಾಗಿದೆ.
ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ
ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ
ತಡೆಗಟ್ಟುವ ಸಲುವಾಗಿ ಎಲ್ಲಾ 33 ಪರೀಕ್ಷಾ ಕೇಂದ್ರಗಳಲ್ಲಿ ಫೆ.
28 ರಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್
ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ
ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರದ
ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು, ಸೈಬರ್
ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.