ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ
ಬಿ.ಎ ಬಸವರಾಜ ಇವರು ಮಾ.01 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಮಾ.01 ರಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ಬೆ. 10.30ಕ್ಕೆ
ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೋಬಳಿಯ
ತಣೀಗೆರೆ ಗ್ರಾಮದಲ್ಲಿ ಜರುಗುವ ಜನಸ್ಪಂದನ
ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3
ಗಂಟೆಗೆ ಹೊನ್ನಾಳಿಗೆ ತೆರಳಿ, ಮುಖ್ಯಮಂತ್ರಿಯವರ
ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ
ಎಂ.ಪಿ.ರೇಣುಕಾಚಾರ್ಯ ಅವರ ಹುಟ್ಟುಹಬ್ಬದ ಆಚರಣೆಯಲ್ಲಿ
ಪಾಲ್ಗೊಳ್ಳುವರು. ಸಚಿವರು ಅಂದು ಮಧ್ಯಾಹ್ನ 3.30ಕ್ಕೆ
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ
ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.